ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ವಶದಲ್ಲಿರುವ ಚೈತ್ರಾ ಕುಂದಾಪುರ (Chaitra Kundapura) ಅವರ ನಾಟಕ ಹೆಚ್ಚಾಗುತ್ತಿದೆ.
ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದಾರೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಪಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟದ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆಗಳು ನಡೆಯುತ್ತಲಿವೆ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಬಂದ ತನಿಖಾಧಿಕಾರಿ ಸಿಸಿಬಿ ಕಚೇರಿಗೆ ವಾಪಸ್ ಆಗಿದ್ದಾರೆ. ಅಲ್ಲದೇ ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಅಲ್ಲದೇ, ಆಸ್ಪತ್ರೆಗೆ ದಾಖಲಾಗಿರುವ ಚೈತ್ರಾ ಕುಂದಾಪುರ ವೈದ್ಯರು ಮಾತಾಡಿಸಿದ್ದಕ್ಕೆ ಸನ್ನೆ ಮೂಲಕ ಮಾತನಾಡಲು ಆಗುತ್ತಿಲ್ಲ ಎಂದು ಹೇಳುತ್ತಿದ್ದಾಳೆ ಎನ್ನಲಾಗಿದೆ. ಆದರೆ, ವೈದ್ಯರು ಮಾತ್ರ ಅವರ ಆರೋಗ್ಯ ಸ್ಥಿರವಾಗಿದೆ ಎನ್ನುತ್ತಿದ್ದಾರೆ. ಹೀಗಾಗಿ ಸಿಸಿಬಿ ಅಧಿಕಾರಿಗಳು ಸುಸ್ತಾಗಿದ್ದಾರೆ.








