ಬೆಂಗಳೂರು : ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿ, ಅರುಣ್ ಕುಮಾರ್ ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಪ್ರಧಾನಕಾರ್ಯದರ್ಶಿ ಎನ್. ರವಿಕುಮಾರ್ ರವರು ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿಯವರು ಮತ್ತು ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.
ಮತ್ತೊಂದೆಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ಇಂದು ತಮ್ಮ ಹುಬ್ಬಳ್ಳಿಯ ನಿವಾಸದಲ್ಲಿ ಯೋಗಾಭ್ಯಾಸ ನಡೆಸಿದರು.









