ಬೆಂಗಳೂರು : ಉದ್ಯಮಿಯೊಬ್ಬರಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ (Chaithra Kundapura) ಸೇರಿದಂತೆ 7 ಜನ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಚೈತ್ರಾ ಹಾಗೂ ಗ್ಯಾಂಗ್ ನ್ನು ಸಿಸಿಬಿ ಇಂದು (ಶನಿವಾರ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ಸಂದರ್ಭದಲ್ಲಿ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡಿದ್ದರು. ಈ ವೇಳೆ ನ್ಯಾಯಾಧೀಶರ ಮುಂದೆ ಕಣ್ಣೀರು ಸುರಿಸಿದ್ದಾಳೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಚೈತ್ರಾ ಸೇರಿದಂತೆ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನನಾಯ್ಕ್, ಧನರಾಜ್, ಶ್ರೀಕಾಂತ್ ಆರೋಪಿಗಳನ್ನು ಅ.6 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ರಮೇಶ್, ಚನ್ನನಾಯ್ಕ್ ಮತ್ತು ಧನರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಸೆ.26ಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಸೆ.26 ಕ್ಕೆ ಮುಂದೂಡಿದೆ.








