ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಎದುರೇ ನಾಯಕರು ರೌಡಿಗಳಂತೆ ಕಿತ್ತಾಡಿರುವ ಘಟನೆ ನಡೆದಿದೆ.
ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಹಾಗೂ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ (SN Narayanaswamy) ಇಬ್ಬರೂ ಜನಪ್ರತಿನಿಧಿಗಳಾಗಿದ್ದರೂ ಜನರ ಎದುರೇ ರೌಡಿಗಳಂತೆ ಬಡಿದಾಡಿಕೊಂಡಿದ್ದಾರೆ.
ಕೋಲಾರದ ಉಸ್ತುವಾರಿ ಸಚಿವ ಭೈರತಿ ಸುರೇಶ್ (Byrathi Suresh) ಜನತಾ ದರ್ಶನ ನಡೆಸುತ್ತಿದ್ದ ಸಂದರ್ಭದಲ್ಲಿ ಜಟಾಪಟಿ ನಡೆದಿತ್ತು. ಈಗ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ಇಬ್ಬರ ವಿರುದ್ಧವೂ ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾರಾಯಣಸ್ವಾಮಿ ವಿರುದ್ಧ ಬಿಜೆಪಿ ಯುವಮೋರ್ಚಾದ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದರೆ, ಮುನಿಸ್ವಾಮಿ ವಿರುದ್ಧ ಖುದ್ದು ನಾರಾಯಣಸ್ವಾಮಿ ದೂರು ದಾಖಲಿಸಿದ್ದಾರೆ. ಆದರೆ, ಜನ ಮಾತ್ರ ಎಂತಹ ವ್ಯಕ್ತಿಗಳನ್ನು ನಾವು ಆಯ್ಕೆ ಮಾಡಿದೇವು ಎಂದು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.