ಅಪ್ರಾಪ್ತ ಬಾಲಕಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಾಲಕಿಗೆ ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಶುಕ್ರವಾರ ಆಕೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆಕೆಯ ತ್ಮಹತ್ಯೆ ಕುರಿತು ಗ್ರಾಮಾಂತರ ಪೊಲೀಸರು ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಋತುಸ್ರಾವದ ಸಂದರ್ಭದಲ್ಲಿ ಕೆಲವು ಹೆಣ್ಣು ಮಕ್ಕಳಿಗೆ ನೋವು ಕಾಡುತ್ತಿದೆ. ಇದೇ ನೋವಿನಿಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ರಕ್ತ ಹೀನತೆ ಇರುವವರು, ದೇಹದಲ್ಲಿ ಅಷ್ಟೊಂದು ಶಕ್ತಿ ಇಲ್ಲದವರನ್ನು ಇದು ಅತಿಯಾಗಿ ಕಾಡುತ್ತದೆ. ಕೆಲವರಲ್ಲಿ ಗರ್ಭಕೋಶದಲ್ಲಿ ಗುಳ್ಳೆಗಳು ಇದ್ದರೂ ಸಮಸ್ಯೆ ಕಂಡು ಬರುತ್ತದೆ ಎನ್ನಲಾಗುತ್ತದೆ.