ನೈಸ್ ರಸ್ತೆಯಲ್ಲಿನ ಸೋಮಪುರ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರು ರಸ್ತೆಯಿಂದ ಕನಕಪುರ ಮಾರ್ಗವಾಗಿ ತೆರಳುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎರಡು ವರ್ಷದ ಮಗು ಹಾಗೂ ಸಿಂಧು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹೇಂದ್ರ ಹಾಗೂ ಮತ್ತೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ಮಾರ್ಗವಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಹೀಗಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.