ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಹಂಪಾಪುರದಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳು ದಿಢೀರ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾಂಶುಪಾಲೆ ವಿದ್ಯಾರ್ಥಿಗಳ ಮೇಲೆ ಸುಮ್ಮ ಸುಮ್ಮನೆ ಹಲ್ಲೆ ನಡೆಸುತ್ತಾರೆ. ಅಲ್ಲದೇ, ಸಹ ಶಿಕ್ಷಕರಿಗೆ ಕಿರುಕುಳ ಹಾಗೂ ಸೂಕ್ತ ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮಕ್ಕಳ ಪ್ರತಿಭಟನೆಗೆ ಪೋಷಕರು ಕೂಡ ಸಾಥ್ ನೀಡಿದ್ದರು. ಪ್ರಾಂಶುಪಾಲೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಒಂದು ವೇಳೆ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.