ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಅದ್ಭುತ ಆರಂಭ ಲಭಿಸಿದೆ. ದಿನದಿಂದ ದಿನಕ್ಕೆ ರೋಚಕತೆ ಹೆಚ್ಚುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಹೊಸ ದಾಖಲೆಗಳ ಸೃಷ್ಠಿಯಾಗಿದ್ದು, ಹಲವು ಆಟಗಾರರು ಸಹ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನದಿಂದ ಮಿಂಚಿದ್ದಾರೆ.
ಈ ನಡುವೆ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಸೌತ್ ಆಫ್ರಿಕಾದ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್ ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಶ್ರೇಷ್ಠ ಬ್ಯಾಟಿಂಗ್ ಮೂಲಕ ಎದುರಾಳಿ ತಂಡಗಳ ನಿದ್ದೆಗಡೆಸಿರುವ ಈ ಇಬ್ಬರು ದಿಗ್ಗಜ ಬ್ಯಾಟರ್‌ಗಳು ಇದೀಗ ವಿಶ್ವಕಪ್‌ನ ಮಹತ್ವದ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದು, ಈ ದಾಖಲೆ ಬ್ರೇಕ್ ಮಾಡಲು ಉತ್ಸುಕರಾಗಿದ್ದಾರೆ.
ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಭರ್ಜರಿ ಎರಡು ಶತಕ ದಾಖಲಿಸಿರುವ ಕ್ವಿಂಟನ್ ಡಿಕಾಕ್, 209 ರನ್‌ಗಳಿಸಿ ಮಿಂಚಿದ್ದರೆ. ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ, ಆಡಿರುವ ಮೂರು ಪಂದ್ಯಗಳಿಂದ ಒಂದು ಶತಕ ಹಾಗೂ ಒಂದು ಅರ್ಧಶತಕದ ನೆರವಿನಿಂದ 217 ರನ್‌ಗಳಿಸಿದ್ದಾರೆ. ಹೀಗಾಗಿ ಪ್ರಸಕ್ತ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿರುವ ಈ ಇಬ್ಬರು, ಇದೀಗ ಏಕದಿನ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ರನ್‌ಗಳಿಸಿ ಹೊಸ ದಾಖಲೆ ಬರೆಯುವ ನಿರೀಕ್ಷೆ ಹೊಂದಿದ್ದಾರೆ.
ಏಕದಿನ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ರನ್‌ಗಳಿಸಿರುವ ದಾಖಲೆ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದೆ. ಈ ಹಿಂದೆ 2003ರ ವಿಶ್ವಕಪ್‌ನಲ್ಲಿ ತೆಂಡುಲ್ಕರ್, 673 ರನ್‌ಗಳಿಸಿದ್ದು ಈವರೆಗಿನ ದಾಖಲೆಯಾಗಿದೆ. ಇವರ ನಂತರದಲ್ಲಿ 2007ರ ವಿಶ್ವಕಪ್‌ನಲ್ಲಿ 659 ರನ್‌ಗಳಿಸಿದ್ದ ಮ್ಯಾಥ್ಯೂ ಹೇಡನ್ 2ನೇ ಸ್ಥಾನದಲ್ಲಿದ್ದಾರೆ. ಈ ಲಿಸ್ಟ್‌ನಲ್ಲಿ 3ನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 2019ರ ವಿಶ್ವಕಪ್‌ನಲ್ಲಿ 648 ರನ್‌ಗಳಿಸಿದ್ದರು.
ಹೀಗಾಗಿ ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ರೋಹಿತ್ ಶರ್ಮ ಹಾಗೂ ಕ್ವಿಂಟನ್ ಡಿಕಾಕ್ ಈ ದಾಖಲೆ ಮುರಿಯುವತ್ತ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ಇಬ್ಬರು ಶ್ರೇಷ್ಠ ಬ್ಯಾಟರ್‌ಗಳಿಗೆ ಕನಿಷ್ಠ ಆರು ಪಂದ್ಯಗಳು ಅವಕಾಶವಿದೆ.
CWC 2023, ODI World Cup, Rohit Sharma, Quinton de Kock