ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ, ಇದೀಗ ಬಾಂಗ್ಲಾದೇಶ ವಿರುದ್ಧ ನಡೆಯುವ ಪಂದ್ಯಕ್ಕಾಗಿ ಸಜ್ಜಾಗಿದ್ದಾರೆ.
ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನಿರಾಸೆ ಮೂಡಿಸಿದ್ದ ಹಿಟ್‌ಮ್ಯಾನ್, ನಂತರ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ರೋಹಿತ್, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ದ 86 ರನ್‌ಗಳಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾಗಿದ್ದರು. ಇದೀಗ ಅ.19ರಂದು ನಡೆಯುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡುವ ನಿರೀಕ್ಷೆಯೊಂದಿಗೆ ರೋಹಿತ್ ಶರ್ಮಾ, ತಯಾರಿ ಮಾಡಿಕೊಂಡಿದ್ದಾರೆ.
ಪಾಕ್ ತಂಡದ ವಿರುದ್ಧ 86 ರನ್‌ಗಳಿಸುವ ಮೂಲಕ ರೋಹಿತ್ ಶರ್ಮಾ, ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ 2ನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದರು. ಏಕದಿನ ವಿಶ್ವಕಪ್‌ನಲ್ಲಿ 20 ಪಂದ್ಯಗಳನ್ನಾಡಿರುವ ಕ್ಯಾಪ್ಟನ್ ರೋಹಿತ್, 66.38ರ ಬ್ಯಾಟಿಂಗ್ ಸರಾಸರಿಯೊಂದಿಗೆ 1195 ರನ್‌ಗಳಿಸಿದ್ದಾರೆ. ಹೀಗಾಗಿ ಕ್ರಿಕೆಟ್ ಲೋಕದ ದಿಗ್ಗಜ ಬ್ಯಾಟರ್‌ಗಳಾದ ಬ್ರಿಯಾನ್ ಲಾರಾ ಹಾಗೂ ಎಬಿ ಡಿವಿಲಿಯರ್ಸ್ ದಾಖಲೆ ಮುರಿಯುವತ್ತ ರೋಹಿತ್ ಕಣ್ಣಿಟ್ಟಿದ್ದು, ಇದಕ್ಕಾಗಿ ಹಿಟ್‌ಮ್ಯಾನ್ ಅವರಿಗೆ ಕೇವಲ 31 ರನ್‌ಗಳ ಅಗತ್ಯವಿದೆ.
ಇವರೊಂದಿಗೆ ಟೀಂ ಇಂಡಿಯಾದ ಮತ್ತೋರ್ವ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಹ ಇದೇ ಹಾದಿಯಲ್ಲಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿರುವ ಬ್ಯಾಟರ್‌ಗಳ ಸಾಲಿನಲ್ಲಿ ಬ್ರಿಯಾನ್ ಲಾರಾ ದಾಖಲೆ ಬ್ರೇಕ್ ಮಾಡಲು ಕೊಹ್ಲಿ ಅವರಿಗೆ ಕೇವಲ 41 ರನ್‌ಗಳ ಅಗತ್ಯವಿದೆ. ಬಾಂಗ್ಲಾ ವಿರುದ್ಧ ಈ ರನ್‌ಗಳಿಸಿದ್ದೇ ಆದಲ್ಲಿ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ 4ನೇ ಸ್ಥಾನಕ್ಕೇರಲಿದ್ದಾರೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಬಡ್ತಿ ಪಡೆಯುವ ನಿಟ್ಟಿನಲ್ಲಿ ಜಿದ್ದಾಜಿದ್ದಿನ ಪೈಪೋಟಿ ನೀಡುವ ನಿರೀಕ್ಷೆ ಹೆಚ್ಚಾಗಿದೆ.
IND v BAN, Team India, Virat Kohli, Rohit Sharma, World Cup