ಹೈದರಾಬಾದ್: ನಡು ರಸ್ತೆಯಲ್ಲಿ ಮಧ್ಯರಾತ್ರಿ ಪೊಲೀಸ್ ಪೇದೆಗೆ ಕಾರು ಡಿಕ್ಕಿ ಹೊಡೆದಿರುವ ಘಟನೆಯೊಂದು ನಡೆದಿದೆ.
ಹೈದರಾಬಾದ್ನ ಚಿಲಕಲಗೂಡು ಪ್ರದೇಶದಲ್ಲಿಯೇ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಪೊಲೀಸ್ ಗೆ ಡಿಕ್ಕಿ ಹೊಡೆದಿದೆ. ಪೊಲೀಸ್ ಪೇದೆ, ಚಿಲಕಲಗೂಡು ಗೋಪಾಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Gopalapuram Police Station) ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪೊಲೀಸ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹೇಶ್ ಗಾಯಗೊಂಡಿರುವ ಪೊಲೀಸ್ ಪೇದೆಯಾಗಿದ್ದು, ಸಂಬಂಧಿಸಿದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಲಕಲಗೂಡ ಆಲುಗದ್ದಾ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ವಾಹನ ಚಲಾಯಿಸುವವರನ್ನು ತಡೆಯಲು ತಡೆಗೋಡೆ ಸ್ಥಾಪಿಸಲಾಗಿತ್ತು. ಆಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಸದ್ಯ ಪೊಲೀಸರು ಕಾರಿನ ನಂಬರ್ ಆಧರಿಸಿ ವಿವರ ಸಂಗ್ರಹಿಸಲು ಮುಂದಾಗಿದ್ದಾರೆ.