ದಿನನಿತ್ಯದ ರಾಜಕೀಯ ಜಂಜಾಟ, ಕೆಲಸದ ಒತ್ತಡದಿಂದ ಬಿಡುವು ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಏಕದಿನ ವಿಶ್ವಕಪ್ ಪಂದ್ಯಾವಳಿ ವೀಕ್ಷಣೆ ಮಾಡಿದರು.
ಉಭಯ ತಂಡಗಳ ನಡುವಿನ ಪಂದ್ಯ ಬೆಂಗಳೂರಿನಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಮ್ಮ ಆಪ್ತರು ಹಾಗೂ ಕೆಲವು ಸ್ನೇಹಿತರೊಂದಿಗೆ ಮೈದಾನಕ್ಕೆ ತೆರಳಿ ಪಂದ್ಯವನ್ನ ವೀಕ್ಷಣೆ ಮಾಡಿದರು. ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡುತ್ತಿರುವ ಏಕದಿನ ವಿಶ್ವಕಪ್ ಪಂದ್ಯವನ್ನ ವೀಕ್ಷಿಸಲು ಕೋಟ್ಯಾಂತರ ಅಭಿಮಾನಿಗಳು ಉತ್ಸುಕರಾಗಿದ್ದು, ಇವರ ಸಾಲಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸಹ ಸೇರಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಬ್ರಿಜೇಶ್ ಪಟೇಲ್ ಸೇರಿದಂತೆ ಇನ್ನಿತರರು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ವೀಕ್ಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಕ್ರಿಕೆಟ್ ಅಭಿಮಾನಿಯಾಗಿದ್ದು, ಈ ಹಿಂದೆಯೂ ಸಹ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ನಡೆದ ಸಂದರ್ಭದಲ್ಲಿ ಸ್ಟೇಡಿಯಂಗೆ ತೆರಳಿ ಪಂದ್ಯ ವೀಕ್ಷಿಸಿದ್ದರು.
AUS v PAK, Australia, Pakistan, Siddaramaiah, Karnataka CM