ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

PAK v AFG: ಅಫ್ಘಾನಿಸ್ತಾನವನ್ನ ಮಣಿಸಿ ಗೆಲುವಿನ ಹಾದಿಗೆ ಮರಳುವ ತವಕದಲ್ಲಿ ಪಾಕಿಸ್ತಾನ

C Dinesh by C Dinesh
October 23, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
PAK v AFG

PAK v AFG

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಆರಂಭ ಪಡೆದರು, ಕಳೆದೆರಡು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿರುವ ಪಾಕಿಸ್ತಾನ ಗೆಲುವಿನ ಹಾದಿಗೆ ಮರಳುವ ತವಕದಲ್ಲಿದ್ದು, ಇದಕ್ಕಾಗಿ ಅಫ್ಘಾನಿಸ್ತಾನದ ಸವಾಲು ಎದುರಿಸಲು ಸಜ್ಜಾಗಿದೆ.

ಎರಡು ತಂಡಗಳ ನಡುವಿನ ಹಣಾಹಣಿಗೆ ಚೆನ್ನೈನ ಎಂ.ಎ. ಚಿದಂಬರಂ ಅಂಗಳದಲ್ಲಿ ವೇದಿಕೆ ಸಜ್ಜಾಗಿದೆ. ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ನೆದರ್ಲೆಂಡ್ಸ್‌ ಹಾಗೂ ಶ್ರೀಲಂಕಾ ತಂಡಗಳನ್ನ ಮಣಿಸಿ ತನ್ನ ಪ್ರಾಬಲ್ಯ ಸಾಧಿಸಿದ್ದ ಪಾಕಿಸ್ತಾನ, ನಂತರ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿತ್ತು. ಹೀಗಾಗಿ ಪ್ರಸಕ್ತ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನವನ್ನ ಮಣಿಸುವ ಮೂಲಕ ಕಮ್‌ಬ್ಯಾಕ್‌ ಮಾಡುವ ಲೆಕ್ಕಾಚಾರದಲ್ಲಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

pakistan

ಟೂರ್ನಿಯಲ್ಲಿ ಎದುರಾಗಿರುವ ಸತತ ಎರಡು ಸೋಲುಗಳು ಪಾಕಿಸ್ತಾನದ ಸೆಮಿಫೈನಲ್‌ ಹಾದಿಗೆ ಮುಳುವಾಗಿದೆ. ಇದರ ಪರಿಣಾಮ ಟೂರ್ನಿಯ ಮುಂದಿನ ಹಂತಕ್ಕೇರಲು ಬಾಬರ್‌ ಆಜ಼ಂ ಪಡೆಗೆ ಮುಂದಿನ ಎಲ್ಲಾ ಪಂದ್ಯಗಳನ್ನ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇದಕ್ಕಾಗಿ ಪಾಕಿಸ್ತಾನ ಹಿಂದಿನ ಪಂದ್ಯಗಳಲ್ಲಿ ಮಾಡಿರುವ ತಪ್ಪುಗಳನ್ನ ಸರಿಪಡಿಸಿಕೊಂಡು ಕಣಕ್ಕಿಳಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಅಫ್ಘಾನ್‌ ವಿರುದ್ಧದ ಈ ಹಿಂದಿನ 7 ಮುಖಾಮುಖಿಯಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿರುವ ಪಾಕ್‌ ಪಡೆ ಗೆಲುವಿನ ನಗೆಬೀರಿದೆ.

Afghanistan

ಮತ್ತೊಂದೆಡೆ ಸಂಘಟಿತ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಅಫ್ಘಾನಿಸ್ತಾನ ಕೂಡ ಪಾಕಿಸ್ತಾನಕ್ಕೆ ಟಾಂಗ್‌ ನೀಡುವ ಉತ್ಸಾಹದಲ್ಲಿದೆ. ಈಗಾಗಲೇ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಜಯಭೇರಿ ಬಾರಿಸಿದ್ದ ಅಫ್ಘಾನ್‌ ಪಡೆ, ನಂತರ ನ್ಯೂಜಿ಼ಲೆಂಡ್‌ ವಿರುದ್ಧ ಸೋಲಿನ ನಿರಾಸೆ ಅನುಭವಿಸಿತ್ತು. ಆದರೂ ಪಾಕ್‌ ತಂಡಕ್ಕೆ ತಿರುಗೇಟು ನೀಡುವ ಎಲ್ಲಾ ಸಾಮರ್ಥ್ಯ ಅಫ್ಘಾನ್‌ ತಂಡಕ್ಕಿದ್ದು, ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲವಾಗಿರುವ ಚೆನ್ನೈ ಅಂಗಳದಲ್ಲಿ ಜಯದ ಯಶಸ್ಸು ಕಾಣುವ ಲೆಕ್ಕಾಚಾರದಲ್ಲಿದೆ.
ಬ್ಯಾಟಿಂಗ್‌ ಜೊತೆಗೆ ಬೌಲಿಂಗ್‌ನಲ್ಲೂ ಬಲಿಷ್ಠವಾಗಿರುವ ಅಫ್ಘಾನ್‌ ಪಡೆಗೆ ತ್ರಿವಳಿ ಸ್ಪಿನ್ನರ್‌ಗಳಾದ ರಶೀದ್‌ ಖಾನ್‌, ಮೊಹಮ್ಮದ್‌ ನಬಿ ಹಾಗೂ ಮುಜೀಬ್‌ ಉರ್‌ ರಹಮಾನ್‌ ಅವರೇ ಪ್ರಮುಖ ಅಸ್ತ್ರವಾಗಿದ್ದು, ಪ್ರಸಕ್ತ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಎಡವಿರುವ ಪಾಕ್‌ ತಂಡದ ಬ್ಯಾಟರ್‌ಗಳಿಗೆ ಕಡಿವಾಣ ಹಾಕುವ ನಿರೀಕ್ಷೆಯಲ್ಲಿದ್ದಾರೆ.

PAK v AFG, Pakistan, Afghanistan, World Cup, ODI Cricket

Tags: AfghanistanODI cricketPAK v AFGPakistanWorld Cup
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram