ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ (Harish Rawath) ಇದ್ದ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.
ರಾವತ್ ಅವರು ಹಲದ್ವಾನಿಯಿಂದ ಕಾಶಿಪುರದಲ್ಲಿನ ಉದ್ಧಮ್ ಸಿಂಗ್ ನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಆದರೆ, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ರಾವತ್, ದೊಡ್ಡ ಅಪಾಯದಿಂದ ಪಾರಾಗಿದ್ದೇನೆ. ಕೂಡಲೇ ವಿಚಲಿತನಾದೆ. ಅವಘಡ ನಡೆದ ಕೂಡಲೇ ವೈದ್ಯರಿಂದ ಪರೀಕ್ಷಿಸಲ್ಪಟ್ಟಿದೇನೆ. ಸದ್ಯ ಆರೋಗ್ಯ ಚೆನ್ನಾಗಿದೆ ಎಂದು ಹೇಳಿದ್ದಾರೆ.