ಬೆಂಗಳೂರು: ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಅವಾಜ್ ಹಾಕಿದ ಘಟನೆಯೊಂದು ನಡೆದಿದ್ದು, ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರನಿಂದ ಈ ಕೃತ್ಯ ನಡೆದಿದೆ.
ಪುತ್ರ ಆಡಂ ಬಿದ್ದಪ್ಪ (Adam Bidapa) ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ, ವ್ಯಕ್ತಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ಎನ್ನಲಾಗಿದೆ. ಈ ಘಟನೆ ಯಲಹಂಕದಲ್ಲಿ ನಡೆದಿದೆ.
ಹೀಗಾಗಿ ಸ್ಥಳಕ್ಕೆ ಆಗಮಿಸಿದ ಯಲಹಂಕ ಸಂಚಾರಿ ಪೊಲೀಸರ (Police) ಜೊತೆಗೂ ಆಡಂ ವಾಗ್ವಾದ ನಡೆಸಿದ್ದಾನೆ. ಆನಂತರ ಅವಿವಾ ಬಿದ್ದಪ್ಪ ಅವರಿಗೆ ಕರೆ ಮಾಡಿ ಮಾತಾಡುವಂತೆ ಹೇಳಿದ್ದಾನೆ. ಈ ಸಂದರ್ಭದಲ್ಲಿ ನೀನು ಯಾರಿಗೆ ಬೇಕಾದರೂ ಹೇಳು ಎಂದು ಆತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ರಾಹುಲ್, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.