ಬೆಳಗಾವಿ: ಧ್ವಜಸ್ತಂಭ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರಹರಿಸಿರುವ ಸಂದರ್ಭದಲ್ಲಿ ಯುವಕ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಬೈಲಹೊಂಗಲ (Bailahongala) ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಮುನೇಪ್ಪನವರ (18) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ. ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಬಸ್ ನಿಲ್ದಾಣದ ಎದುರು ಧ್ವಜಸ್ತಂಭ ತಯಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.








