ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಗ್ರಹವಾಗಿದ್ದ ನೀರಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರ್ಷಲನ್ ಖಾನ್ (9) ಹಾಗೂ ಅಮೀನ್ ಖಾನ್ (7) ಸಾವನ್ನಪ್ಪಿದ ಮೃತ ದುರ್ದೈವಿಗಳು ಎಂದು ತಿಳುದ ಬಂದಿದೆ. ನಿರ್ಮಾಣ ಹಂತದ ಕಟ್ಟಡದ ಬೇಸ್ಮೆಂಟ್ ನಲ್ಲಿ ನೀರು ಸಂಗ್ರವಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳು ಅದರಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.








