ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ ಹತ್ತಿರ ದಲಿತ ಮುಖಂಡ (Dalit Leader) ಪ್ರಸಾದ್(40) ಹತ್ಯೆಯಾಗಿರುವವರು ಎನ್ನಲಾಗಿದೆ.
ದುಷ್ಕರ್ಮಿಗಳು ಪ್ರಸಾದ್ ಅವರು ತೆರಳುತ್ತಿದ್ದ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








