ಬೆಂಗಳೂರು: ಸಾರಿಗೆ ನೌಕರರ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂ.ದಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.
ಅಪಘಾತ ಹೊರತುಪಡಿಸಿ ಸೇವಾ ಅವಧಿಯಲ್ಲಿ ಹೃದಯಾಘಾತ, ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಸ್ಟ್ರೋಕ್ ನಿಂದ ಸಾವನ್ನಪ್ಪಿದ ನೌಕರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಅಪಘಾತದಿಂದ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರರ ಅವಲಂಬಿತರಿಗೆ 1 ಕೋಟಿ ರೂ. ವಿಮಾ ಪರಿಹಾರ ಮೊತ್ತ ನೀಡಲಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡಲಾಗಿದೆ.
ಸೇವಾವಧಿಯಲ್ಲೇ ಮರಣ ಹೊಂದುತ್ತಿರುವ ಸುಮಾರು 100 ಕ್ಕೂ ಹೆಚ್ಚು ಪ್ರಕರಣಗಳು ನಿಗಮದಲ್ಲಿ ಪ್ರತಿ ವರ್ಷ ದಾಖಲಾಗುತ್ತಿವೆ. ಹೀಗಾಗಿ ಪರಿಹಾರದ ಮೊತ್ತ ಹೆಚ್ಚಿಸಲಾಗಿದೆ.








