ದಾವಣಗೆರೆ : ರಾಜ್ಯದಲ್ಲಿ ಕೊರೊನಾಸುರನ ಆರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದ್ದವು. ಆದರೆ ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದು ಮಾಡಲ ಆಗುವುದಿಲ್ಲ ಎಂದು ಸರ್ಕಾರ ಖಡಕ್ ಆಗಿ ಹೇಳಿತ್ತು.
ಆದರೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಕೆಲವಡೆ ಲಾಕ್ ಡೌನ್ , ಇನ್ನೂಳಿದ ಕಡೆ ಸೀಲ್ ಡೌನ್, ಕಂಟೇನ್ಮಂಟ್ ಜೋನ್ ಗಳನ್ನು ಮಾಡಲಾಗಿದೆ. ಆದರೆ ಈ ಪ್ರದೇಶಗಳಲ್ಲಿರುವ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬ ಸಮಸ್ಯೆ ಎದುರಾಗಿತ್ತು. ಅದಕ್ಕಾಗಿ ಒಂದು ವೇಳೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೇ, ಅಥಾವ ಅವರ ಕುಟುಂಬದ ಸದಸ್ಯರಿಗೆ ಕಾಣಿಸಿಕೊಂಡಿದ್ದರೇ ಅಂತಹ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಿಲ್ಲ. ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಜೊತೆಗೆ ಪ್ರಥಮ ಹಂತದಲ್ಲಿ ಪಾಸ್ ಆಗಿದ್ದಾರೆ ಎಂದು ಪರಿಗಣಿಸಲಾಗುವುದು ಎಂದು ಸರ್ಕಾರ ಹೇಳಿತ್ತು.
ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಮನೆಯಲ್ಲಿ ಇರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಚನ್ನಗಿರಿಯ ಇಬ್ಬರು, ಹರಿಹರದ ಒಬ್ಬ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಕೊರೊನಾ ಸೋಂಕಿತರ ಮನೆಯವರಾಗಿದ್ದಾರೆ. ಹಾಗಾಗಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಜೊತೆಗೆ ಕಂಟೇನ್ಮೇಂಟ್ ಜೋನ್ ಗಳಲ್ಲಿ 96 ವಿದ್ಯಾರ್ಥಿಗಳು ಇದ್ದಾರೆ. ಅವರಿಗೆ ಪರೀಕ್ಷೆ ಬರೆಯಲು ಪ್ರತೇಕ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.








