ಚಿಕ್ಕಬಳ್ಳಾಪುರ : ಯುವಕನೊಬ್ಬನ ಮನೆಯಲ್ಲಿ ಹುಲಿಯ ಉಗುರು ಮಾದರಿಯ ವಸ್ತು ಪತ್ತೆಯಾಗಿದ್ದು, ಯುವಕ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಚಿಂತಾಮಣಿ (Chintamani) ತಾಲೂಕಿನ ಸೂಲದೇನಹಳ್ಳಿ ಗ್ರಾಮದಲ್ಲಿಯೇ ಈ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಯುವಕನ ಮನೆಯ ಮೇಲೆ ದಾಳಿ ನಡೆಸಿದ್ದು, ಹುಲಿ ಉಗುರನ್ನು ವಶಕ್ಕೆ ಪಡೆದಿದ್ದಾರೆ.
ಗ್ರಾಮದ ನವೀನ್ ಎಂಬ ಯುವಕನ ಮನೆಯಲ್ಲಿಯೇ ನವೀನ್ ಎಂಬುವವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲಿ ಹುಲಿ ಉಗುರಿನ ಮಾದರಿಯ ವಸ್ತು ಪತ್ತೆಯಾಗಿದೆ. ಸದ್ಯ ಈ ವಸ್ತುವನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ, ಯುವಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.