ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿ಼ಲೆಂಡ್ ವಿರುದ್ಧ ನಡೆದ ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ(117) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕಿವೀಸ್ ಬೌಲಿಂಗ್ ದಾಳಿಯನ್ನ ಸಮರ್ಥವಾಗಿ ಎದುರಿಸುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ ತಮ್ಮ 50ನೇ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದರು. ಅಲ್ಲದೇ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್(49 ಶತಕ) ಅವರ ದಾಖಲೆ ಮುರಿಯುವಲ್ಲಿ ಕೂಡ ಕಿಂಗ್ ಕೊಹ್ಲಿ ಯಶಸ್ವಿಯಾದರು.
ಈ ಪ್ರದರ್ಶನದ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ವಿಶ್ವದ 3ನೇ ಬ್ಯಾಟರ್ ಎನಿಸಿದರು. ಕಿವೀಸ್ ವಿರುದ್ಧ ವೈಯಕ್ತಿಕ 28 ರನ್ಗಳಿಸಿದ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್(13,704 ರನ್ಗಳು) ಅವರ ದಾಖಲೆ ಹಿಂದಿಕ್ಕಿದರು. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಹೆಚ್ಚು ರನ್ಗಳಿಸಿದ ಬ್ಯಾಟರ್ಗಳ ಸಾಲಿನಲ್ಲಿ ಕೊಹ್ಲಿ,(291 ಏಕದಿನ ಪಂದ್ಯ, 13,794* ರನ್) 3ನೇ ಸ್ಥಾನಕ್ಕೇರಿದರು.
ಏಕದಿನ ಕ್ರಿಕೆಟ್ನಲ್ಲಿ ಹೆಚ್ಚು ರನ್ಗಳು:
ಸಚಿನ್ ತೆಂಡುಲ್ಕರ್ – 18,426 ರನ್ಗಳು
ಕುಮಾರ ಸಂಗಕ್ಕಾರ – 14,234 ರನ್ಗಳು
ವಿರಾಟ್ ಕೊಹ್ಲಿ – 13,794* ರನ್ಗಳು
ರಿಕಿ ಪಾಂಟಿಂಗ್ – 13,704 ರನ್ಗಳು
IND v NZ, Virat Kohli, Team India, Most Runs, ODI World Cup