ನಿರುದ್ಯೋಗಿಗಳಿಗೆ ಐಟಿಬಿಪಿಯಿಂದ ಭರ್ಜರಿ ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 248 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನ. 28ರೊಳಗಾಗಿ ಅರ್ಜಿ ಸಲ್ಲಿಸಬಹುದು.
ವೇತನ: ರೂ.21700-69100/- ವರೆಗೆ ಇರಲಿದೆ. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು. ನವೆಂಬರ್ 28ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು. ದೈಹಿಕ ಮಾನದಂಡಗಳ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು ಎಂದು ಅಧಿಸೂಚನೆ ತಿಳಿಸಿದೆ.