ರಾಯಚೂರು: ಪತಿಯೊಬ್ಬಾದ ತನ್ನ ಪತ್ನಿಗೆ ನೇಣು ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ. 14 ವರ್ಷಗಳಿಂದ ಮದುವೆಯಾಗಿ ಎಲ್ಲವನ್ನೂ ಸಹಿಸಿಕೊಂಡು ಸಂಸಾರ ನಡೆಸುತ್ತಿದ್ದ ಭುವನೇಶ್ವರಿ(31) ಎಂಬುವವರನ್ನೇ ಆರೋಪಿ ಪತಿ ಕೊಲೆ ಮಾಡಿದ್ದಾನೆ.
ಆರಂಭದಲ್ಲಿ ಇವರ ಸಂಸಾರ ಚೆನ್ನಾಗಿಯೇ ಇತ್ತು. ಆದರೆ, ಇತ್ತೀಚೆಗೆ ಪತಿ ಕುಡಿತದ ದಾಸನಾಗಿದ್ದ. ಹೀಗಾಗಿ ಮನೆಯಲ್ಲಿ ಜಗಳ ಶುರುವಾಗಿತ್ತು. ಆಗಾಗ ಪತಿ ಹಾಗೂ ಪತ್ನಿಯ ಮಧ್ಯೆ ಜಗಳ ನಡೆಯುತ್ತಿತ್ತು. ಹೀಗೆ ಕುಡಿದ ಪತಿ ಹಾಗೂ ಪತ್ನಿಯ ಮಧ್ಯೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಪತಿಯು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ನೇಣು ಬಿಗಿದು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.
ಸದ್ಯ ಆರೋಪಿ ಪತಿ ನಾಗರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.