ಮಂಡ್ಯ: ಜಮೀನಿಗೆ ತೆರಳಿದ್ದ ಮಹಿಳೆಯ ಮೇಲೆ ಒಂಟಿ ಸಲಗವೊಂದು ದಾಲಿ ನಡೆಸಿದ್ದು, ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಠನೆ ನಡೆದಿದೆ.
ಈ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಲಾಳನಕೆರೆ-ಪೀಹಳ್ಳಿ ಹತ್ತಿರ ಬೆಳಿಗ್ಗೆ ನಡೆದಿದ್ದು, ಮಹಿಳೆ ಎಂದಿನಂತೆ ತಮ್ಮ ಜಮೀನಿಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಆನೆ ದಾಳಿ ನಡೆಸಿದ್ದು, ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಲಾಳನಕೆರೆ ಗ್ರಾಮದ ಸಾಕಮ್ಮ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಮಹಿಳೆ ಎಂದು ತಿಳಿದು ಬಂದಿದೆ. ಈ ಘಠನೆಯಿಂದಾಗಿ ಗ್ರಾಮಸ್ಥರು ತೀವ್ರವಾಗಿ ಆತಂಕಗೊಂಡಿದ್ದು, ಆನೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ. ಸ್ತಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.