ನಟ ಸುದೀಪ್ ಮನೆಗೂ ಕಾಡಿದೆ ಕೊರೋನಾ ಆತಂಕ !
ಬೆಂಗಳೂರು, ಜೂನ್ 23 : ಜೆಪಿ ನಗರದಲ್ಲಿರುವ ಚಿತ್ರನಟ ಕಿಚ್ಚ ಸುದೀಪ್ ಮನೆಗೆ ಹೊಂದಿಕೊಂಡಿರುವ ಮನೆಯಲ್ಲಿ ವಾಸವಿದ್ದ ಇಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಡೀ ಏರಿಯಾದಲ್ಲಿ ಆತಂಕ ಸೃಷ್ಟಿಯಾಗಿದೆ.
ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೆ.ಪಿ.ನಗರದ 6 ನೇ ಹಂತದ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ವಾಹನ ಓಡಾಟ ಮತ್ತು ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ.
ವ್ಯಾಪಾರಿ ಕುಟುಂಬದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸುಮಾರು 30ಕ್ಕೂ ಅಧಿಕ ಮಂದಿ ಇವರ ಸಂಪರ್ಕದಲ್ಲಿದ್ದರು ಎಂದು ಹೇಳಲಾಗುತ್ತಿದೆ. ಇವರ ಕುಟುಂಬ ಸದಸ್ಯರು ಚಿಕ್ಕಪೇಟೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಹಿನ್ನಲೆಯಲ್ಲಿ, ಆ ಪ್ರದೇಶದಲ್ಲಿಯೂ ಸೋಂಕು ತಗುಲಿರಬಹುದೆಂದು ಶಂಕಿಸಲಾಗಿದೆ. ಇದೀಗ ಇವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡುವ ಕಾರ್ಯ ನಡೆಯುತ್ತಿದೆ