ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್‌ಗೆ ನಾಯಕತ್ವದ ಹೊಣೆ

ಹಿರಿಯ ಆಟಗಾರರಿಗೆ ವಿಶ್ರಾಂತಿ, ಯುವ ಆಟಗಾರರಿಗೆ ಅವಕಾಶ

C Dinesh by C Dinesh
November 21, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಬಹುನಿರೀಕ್ಷಿತ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಸೋಲಿನ ಆಘಾತ ಕಂಡ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧ ನಡೆಯುವ ಟಿ20 ಸರಣಿಗೆ ಸಜ್ಜಾಗಿದ್ದು, ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಏಕದಿನ ವಿಶ್ವಕಪ್‌ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಈ ನಡುವೆ ವಿಶ್ವಕಪ್‌ ಟೂರ್ನಿಯ ವೇಳೆ ಗಾಯಗೊಂಡಿರುವ ಹಾರ್ದಿಕ್‌ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ “ಮಿ.360” ಖ್ಯಾತಿಯ ಸೂರ್ಯಕುಮಾರ್‌ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ಟಿ20 ಕ್ರಿಕೆಟ್‌ನ ನಂ.1 ಬ್ಯಾಟರ್‌ ಆಗಿರುವ ʼಸ್ಕೈʼ ಮೊದಲ ಬಾರಿಗೆ ಭಾರತ ತಂಡದ ನಾಯಕತ್ವದ ಸವಾಲು ಎದುರಿಸಲು ಸಜ್ಜಾಗಿದ್ದಾರೆ.

Suryakumar

ಐದು ಪಂದ್ಯಗಳ ಆಸೀಸ್‌ ಸರಣಿಗೆ ಯುವ ಆಟಗಾರರಿಗೆ ಹೆಚ್ಚಿನ ಹೊಣೆ ನೀಡಿರುವ ಹಿನ್ನೆಲೆಯಲ್ಲಿ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ರಿಂಕು ಸಿಂಗ್, ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್ ಅವರುಗಳಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರೊಂದಿಗೆ ಋತುರಾಜ್‌ ಗಾಯಕ್ವಾಡ್‌, ಇಶಾನ್‌ ಕಿಶನ್‌ ಅವರುಗಳು ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದರೆ. ಜಿತೇಶ್‌ ಶರ್ಮಾ ಅವರಿಗೆ ವಿಕೆಟ್‌ ಕೀಪರ್‌ ಜವಾಬ್ದಾರಿ ನೀಡಲಾಗಿದೆ. ಇನ್ನೂ ಆಲ್ರೌಂಡರ್‌ ಸ್ಥಾನದಲ್ಲಿ ಅಕ್ಸರ್‌ ಪಟೇಲ್‌ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಇನ್ನೂ ಬೌಲಿಂಗ್‌ನಲ್ಲಿ ಹಿರಿಯ ಆಟಗಾರರಿಗೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅರ್ಶದೀಪ್‌ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯಿ ಹಾಗೂ ಅಕ್ಸರ್‌ ಪಟೇಲ್‌ ಅವರು ತಂಡದ ಬೌಲಿಂಗ್‌ ವಿಭಾಗದ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇವರೊಂದಿಗೆ ಏಕದಿನ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನದಿಂದ ಮಿಂಚಿದ್ದ ಶ್ರೇಯಸ್‌ ಅಯ್ಯರ್‌, ಆಸೀಸ್‌ ವಿರುದ್ಧದ T20I ಸರಣಿಯ ಕೊನೆಯ ಎರಡು ಪಂದ್ಯಕ್ಕೆ ತಂಡವನ್ನ ಸೇರಿಕೊಳ್ಳಲಿದ್ದು, ತಂಡದ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಆರಂಭಿಕ 3 ಪಂದ್ಯಗಳಲ್ಲಿ ಋತುರಾಜ್ ಗಾಯಕ್ವಾಡ್ ಅವರು ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ಶ್ರೇಯಸ್ ಅಯ್ಯರ್ (ಕೊನೆಯ ಎರಡು T20I ಪಂದ್ಯಗಳಿಗೆ)

ಭಾರತ v ಆಸ್ಟ್ರೇಲಿಯಾ ಟಿ20 ವೇಳಾಪಟ್ಟಿ:
1ನೇ ಟಿ20 – ನವೆಂಬರ್‌ 23, ವಿಶಾಖಪಟ್ಟಣಂ
2ನೇ ಟಿ20 – ನವೆಂಬರ್‌ 26, ತಿರುವನಂತಪುರಂ
3ನೇ ಟಿ20 – ನವೆಂಬರ್‌ 28, ಗುವಾಹತಿ
4ನೇ ಟಿ20 – ಡಿಸೆಂಬರ್‌ 1, ರಾಯ್‌ಪುರ್‌
5ನೇ ಟಿ20 – ಡಿಸೆಂಬರ್‌ 3, ಬೆಂಗಳೂರು

IND v AUS, Team India, Australia, Suryakumar Yadav, T20I Series

Tags: AustraliaIND v AUSSuryakumar YadavT20I seriesteam india
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram