ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ: ಡಿ.ಕೆ.ಶಿವಕುಮಾರ್

admin by admin
June 24, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಸರಕಾರಗಳ ವ್ಯಾಪ್ತಿಯಲ್ಲಿರುವ ಕಾಯ್ದೆಗಳ ಬದಲಾವಣೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ರವಾನಿಸಿದ್ದು, ಇದು ಒಕ್ಕೂಟ ವ್ಯವಸ್ಥೆ ನಾಶ ಮಾಡುವ ಹುನ್ನಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಜುಲೈ 2 ರಂದು ರಾಜ್ಯಾದ್ಯಂತ ನಡೆಯಲಿರುವ ಪ್ರತಿಜ್ಞಾ ದಿನ ಕಾರ್ಯಕ್ರಮ ಪೂರ್ವ ತಯಾರಿ ಕುರಿತ ಸಮಾಲೋಚನಾ ಸಭೆಯಲ್ಲಿ ಮಂಗಳವಾರ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷವು ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ತಂದು ಜನರಿಗೆ ಕೃಷಿ ಮಾಡಲು ಭೂಮಿ ನೀಡಿದೆ. ಅದರೆ ಈಗಿನ ಸರಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸಣ್ಣ ರೈತರಿಗೆ ಮರಣ ಶಾಸನ ಬರೆಯುತ್ತಿದೆ. ಅದೇ ರೀತಿ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ. ಇನ್ನು ಅಂತಾರಾಷ್ಟ್ರೀಯ ಕಾರ್ಮಿಕ ಒಕ್ಕೂಟ ಹಾಗೂ ಅಧಿವೇಶನದಲ್ಲಿ ಚರ್ಚಿಸಿ ತಂದ ಕಾರ್ಮಿಕ ಕಾಯ್ದೆಯನ್ನು ಮೂರು ವರ್ಷ ರದ್ದು ಮಾಡಲು ಹೊರಟಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಇನ್ನು ಅವೈಜ್ಞಾನಿಕವಾಗಿ ಇಂಧನ ಬೆಲೆ ಏರಿಕೆಯಾಗುತ್ತಿದ್ದು, ಈ ಬಗ್ಗೆ ಯಾರೂ ಮಾತನಾಡುತ್ತಲೇ ಇಲ್ಲ. ಬೆಲೆ ಕಡಿಮೆ ಮಾಡಬೇಕಾದ ಸಮಯದಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಬೆಲೆ ಏರಿಸಿ ಕೇಂದ್ರ ಸರ್ಕಾರ ಜನ ವಿರೋಧಿ ತೀರ್ಮಾನ ಕೈಗೊಂಡಿದೆ.

ಈ ಎಲ್ಲ ವಿಚಾರವಾಗಿ ನಮ್ಮ ಶಾಸಕಾಂಗ ಪಕ್ಷದ ನಾಯಕರ ಜತೆ ಚರ್ಚಿಸಿ, ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ನಿಮಗೆ ಸಂದೇಶ ರವಾನಿಸುತ್ತೇವೆ.

ನಾವು ಸಂಪೂರ್ಣ ಸಹಕಾರ ನೀಡಿದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹೃದಯ ಗೆಲ್ಲಲು ಸಾಧ್ಯವಾಗಿಲ್ಲ. ಇದೊಂದು ಯೂಟರ್ನ್ ಸರ್ಕಾರ. ಬೆಳಗ್ಗೆ ಕೊಟ್ಟ ಹೇಳಿಕೆಯನ್ನು ಸಂಜೆ ಬದಲಾಯಿಸುತ್ತದೆ. ಅಧಿವೇಶನ ಕರೆಯಲಿ ಎಲ್ಲವನ್ನು ಬಿಚ್ಚಿಡುತ್ತೇವೆ. ನಾನಾಗಲಿ ನಮ್ಮ ನಾಯಕರಾದ ಸಿದ್ದರಾಮಯ್ಯನವರಾಗಲಿ ಏನನ್ನೂ ಹೇಳುವುದೇ ಬೇಡ, ಮಾಧ್ಯಮಗಳೇ ಎಲ್ಲವನ್ನು ನಿಮ್ಮ ಮುಂದೆ ವಿವರಿಸುತ್ತಿವೆ.

ನಾವು ಸಲಹೆ ಕೊಡುತ್ತೇವೆ ಕೇಳಿ ಎಂದರೆ ನಮ್ಮ ಸಲಹೆ ಬೇಡ ಎಂದರು. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ಸಹಕಾರ ನೀಡಿದೆವು. ನಾವು ಈ ವಿಚಾರದಲ್ಲಿ ತೋರಿದ ಹೃದಯ ಶ್ರೀಮಂತಿಕೆಯನ್ನು ಅವರು ಉಳಿಸಿಕೊಳ್ಳಲಿಲ್ಲ. ಕಡೆಗೆ ಯಾವ ಮಟ್ಟಕ್ಕೆ ಇಳಿದರು ಎಂದರೆ, ಕಾರ್ಮಿಕರಿಗೆ ನೀಡುವ ಕಿಟ್ ಅನ್ನು ತಮ್ಮ ಫೋಟೋ ಹಾಕಿಕೊಂಡು ತಮ್ಮ ಬೆಂಬಲಿಗ ಮತದಾರರಿಗೆ ಕೊಟ್ಟರು.

ಅಧಿಕಾರ ಇಲ್ಲದಿದ್ದರೂ, ಚುನಾವಣೆಯಲ್ಲಿ ಸೋತಿದ್ದರೂ ಕಾಂಗ್ರೆಸ್ ನಾಯಕರು ರಾಜ್ಯದ ಉದ್ದಗಲಕ್ಕೂ ಸಹಾಯ ಮಾಡಿದರು. ಆಮೂಲಕ ಸಂಕಷ್ಟದಲ್ಲಿರುವ ಜನರ ಕಣ್ಣೀರು ಒರೆಸಿದರು. ರೈತರಿಗೆ ಸಹಾಯ ಮಾಡಿ ಅಂತಾ ಕೇಳಿಕೊಂಡರೂ ಅವರ ನೆರವಿಗೆ ಬರಲಿಲ್ಲ. ಬೆಂಬಲ ಬೆಲೆ ನಿಗದಿ ಮಾಡಲಿಲ್ಲ. ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಿಲ್ಲ. ರೈತರ ಸಂಕಷ್ಟ ನೋಡಲಾಗದೆ ಕಾಂಗ್ರೆಸ್ ನಾಯಕರು 100 ಕೋಟಿ ರೂಪಾಯಿಗೂ ಹೆಚ್ಚಿನ ತರಕಾರಿ ಖರೀದಿಸಿದರು. ಆ ಮೂಲಕ ಬೆಲೆ ಕುಸಿತ ತಪ್ಪಿಸಿದರು. ಇದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ಆದರೆ ನಮಗೆ ಜನರ ಬಗ್ಗೆ ಇರುವ ಕಾಳಜಿ, ಬದ್ಧತೆ ಮುಖ್ಯ.

ಹೊರಗಡೆಯಿಂದ ಬರುವ ಜನರಿಗೆ ವಿಮಾನ ಸೌಲಭ್ಯ ಕೊಡುತ್ತೀರಿ. ಆದರೆ ದೇಶ ಕಟ್ಟುವ ಕಾರ್ಮಿಕರಿಗೆ ಬಸ್, ರೈಲು ವ್ಯವಸ್ಥೆ ಕಲ್ಪಿಸಲಿಲ್ಲ. ಇವರ ಬಳಿ ಮೂರು ಪಟ್ಟು ಹಣ ವಸೂಲಿ ಮಾಡಲು ಹೊರಟರು. ಇವರ ಪ್ರಯಾಣಕ್ಕೆ ಸಹಕರಿಸುವ ಬಗ್ಗೆ ನಮ್ಮ ಸಿದ್ದರಾಮಯ್ಯನವರು ಹಾಗೂ ರಾಹುಲ್ ಗಾಂಧಿ ಅವರಿಗೆ ಹೇಳಿದಾಗ ಮೊದಲು ಆ ಕೆಲಸ ಮೊದಲು ಮಾಡಿ ಎಂದು ಪ್ರೋತ್ಸಾಹ ನೀಡಿದರು.

ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡುವ ಆಹಾರ ಪದಾರ್ಥಗಳನ್ನೂ ದುರುಪಯೋಗ ಮಾಡಿಕೊಂಡರು. ಈ ಬಗ್ಗೆ ದೂರು ಕೊಟ್ಟರೂ ಈವರೆಗೂ ಕ್ರಮ ಕೈಗೊಂಡಿಲ್ಲ. ಇಂತಾ ಭಂಡತನ ಯಾಕೆ ಮುಖ್ಯಮಂತ್ರಿಗಳೇ?

70 ವರ್ಷ ದೇಶಕ್ಕೆ ಕಾಂಗ್ರೆಸ್ ಏನು ಮಾಡಿದೆ ಅಂತಾ ಕೇಳುತ್ತಾರಲ್ಲಾ, ಈ ಬಡವರು, ಕಾರ್ಮಿಕರಿಗೆ ಧ್ವನಿಯಾಗಿ, ಆರ್ಥಿಕ ಬಲ ತುಂಬಿ ದೇಶವನ್ನು ಕಟ್ಟಿದ್ದೇವೆ. ಇದು ದೇಶಕ್ಕೆ ಕಾಂಗ್ರೆಸ್ ಕೊಡುಗೆ.

ಕೋವಿಡ್ ವಿಚಾರದಲ್ಲಿ ಸರ್ಕಾರ ವಿಫಲ:

ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅವರ ವೈಫಲ್ಯಗಳನ್ನು ಬಿಂಬಿಸುತ್ತಿರುವ ಮಾಧ್ಯಮಗಳೇ ಅದಕ್ಕೆ ಸಾಕ್ಷಿ. ನಿಮಗೆ ಧನ್ಯವಾದಗಳು. ರಾಜ್ಯದಲ್ಲಿ ಸಾವು-ನೋವು ಹೆಚ್ಚುತ್ತಿರುವ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಅವರು ನಮ್ಮ ಸಲಹೆ ಕೇಳಿದರಷ್ಟೇ ಕೊಡುತ್ತೇವೆ ಎಂದರು .

Tags: bangloreCongressd k shivakumar
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram