ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಅಲ್ಲಿಂದಲೇ ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ನಟಿ ಜಾಕ್ವೆಲಿನ್ ಆರೋಪ ಮಾಡಿದ್ದಾರೆ.
ಜೈಲಿನಿಂದ ಜಾಕ್ವೆಲಿನ್ ಗೆ ಪ್ರೇಮ ಪತ್ರ ಕಳುಹಿಸುತ್ತಿದ್ದ. ಸದ್ಯ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಸಿದ್ದಾನೆ ಎಂದು ಆರೋಪಿಸಿದ್ದಾರೆ.
ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರುವುದು ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆ ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಹತ್ತಿದ್ದರು. ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದರು. ಈಗ ಮತ್ತೆ ಸುಕೇಶ್ ವಿರುದ್ಧ ಮತ್ತೊಮ್ಮೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.








