ಟೋಕಿಯೋ: ವಿಮಾನ ಅವಘಡದಿಂದಾಗಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಪಾನಿನ (Japan) ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ (Tokyo’s Haneda Airport)ಯೇ ಈ ಅವಘಡ ಸಂಭವಿಸಿದೆ. ಪರಿಣಾಮ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಏರ್‌ಲೈನ್ಸ್ ಜೆಟ್ ಕೋಸ್ಟ್ ಗಾರ್ಡ್ (Coast Guard aircraft) ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ . ಪ್ರಯಾಣಿಕ ವಿಮಾನದಲ್ಲಿದ್ದ ಎಲ್ಲಾ 367 ಪ್ರಯಾಣಿಕರು ಹಾಗೂ 12 ಜನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆದರೆ, ಆದರೆ ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ 6 ಜನ ಸಿಬ್ಬಂದಿ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
JAL 516 ವಿಮಾನ ಹೊಕ್ಕೈಡೊದಿಂದ ಟೇಕಾಫ್ ಆದ ವಿಮಾನ ಟೋಕಿಯೋದಲ್ಲಿನ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಲ್ಯಾಂಡ್ ಆಗುತ್ತಿದ್ದಾಗ ಹೊತ್ತಿ ಉರಿದಿದೆ. ನಂತರ ಬೆಂಕಿ ಹೊತ್ತಿಕೊಂಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹೊಗೆ ತುಂಬಿದ ಕ್ಯಾಬಿನ್‌ನೊಳಗೆ ಪ್ರಯಾಣಿಕರು ಅಳುತ್ತಿರುವುದು ಹಾಗೂ ಕೆಮ್ಮುತ್ತಲೇ ವಿಮಾನದಿಂದ ಹೊರಗೆ ಓಡಿ ಬರುತ್ತಿರುವುದನ್ನು ಕೂಡ ನೋಡಬಹುದು.








