ದಿಸ್ಪುರ್: ಟ್ರಕ್ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, 12 ಜನರು ಸಾವನ್ನಪ್ಪಿರುವ ಘಟನೆ ಅಸ್ಸಾಂನ (Assam) ಗೋಲಾಘಾಟ್‍ನಲ್ಲಿ ನಡೆದಿದೆ.
ಅಲ್ಲದೇ, ಈ ಅವಘಡದಲ್ಲಿ 25 ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗಿನ ಜಾವ ಈ ಘಟನೆ ನಡೆದಿದೆ. ಬಸ್ ತಿಲಿಂಗ ಮಂದಿರದ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಬಲಿಜನ್ ಪ್ರದೇಶದ ಬಳಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 12 ಜನ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಎನ್ನಲಾಗುತ್ತಿದೆ.








