ಟೋಕಿಯೊ: ಜಪಾನ್‌ನಲ್ಲಿ (Japan Earthquake) ಸಂಭವಿಸಿದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 62ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಇನ್ನೂ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜನವರಿ 1 ರಂದು ಜಪಾನ್ ನಲ್ಲಿ ಭೂಕಂಪ ಸಂಭವಿಸಿತ್ತು. ಇದು ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯ ಭೂಕಂಪ ದಾಖಲಾಗಿತ್ತು. ಹೊನ್ಶು ಮುಖ್ಯ ದ್ವೀಪದ ಇಶಿಕಾವಾ ಪ್ರಾಂತ್ಯದಲ್ಲಿ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತ್ತು. ಅಲ್ಲದೇ, ಇದರೊಂದಿಗೆ ದೊಡ್ಡ ಪ್ರಣಾದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯಿಂದಾಗಿ ನೂರಾರು ಕಟ್ಟಡಗಳು ಧ್ವಂಸಗೊಂಡಿದ್ದವು. ವಾಜಿಮಾ ಮತ್ತು ಸುಜು ಸೇರಿದಂತೆ ಹಲವಾರು ಪಟ್ಟಣಗಳಲ್ಲಿ ಮನೆಗಳು ನೆಲಸಮವಾಗಿವೆ.
ಘಟನೆಯಲ್ಲಿ 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಪೈಕಿ 20 ಜನರ ಸ್ಥಿತಿ ಗಂಭೀರವಾಗಿದೆ. 31,800ಕ್ಕೂ ಅಧಿಕ ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.








