ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಮಾರ್ಚ್ 27ರಿಂದ ಆರಂಭವಾಗುವ ಮುಖ್ಯ ಪರೀಕ್ಷೆಯಲ್ಲೂ ಇದೇ ಪುನರಾವರ್ತನೆಯಾಗಬಹುದೇ ಎಂಬ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಈ ಬಗ್ಗೆ ಫೇನ್ ಬುಕ್ ನಲ್ಲಿ ಮಾತನಾಡಿರುವ ಅವರು, ‘ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪ್ರತಿಕೆ ಸೋರಿಕೆಯಾಗಿದೆ ಎನ್ನುವ ಕುರಿತು ಎಲ್ಲೆಡೆ ವರದಿಯಾಗಿದ್ದು, ಈ ಪರೀಕ್ಷೆ ಮುಂಡೂಡಲಾಗುತ್ತದೆ ಎನ್ನುವ ಆತಂಕ ಮಕ್ಕಳಲ್ಲಿ ಎದುರಾಗಿದೆ. ಆದರೆ ಆಯಾ ದಿನಾಂಕಗಳಲ್ಲೇ ಆಯಾ ಪರೀಕ್ಷೆಗಳು ನಡೆಯುತ್ತವೆ. ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗೂ ವ್ಯತ್ಯಾಸವಿದ್ದು, ಮುಖ್ಯ ಪರೀಕ್ಷೆಯ ಮಾದರಿ ಹೇಗಿರುತ್ತದೆ ಎನ್ನುವುದನ್ನು ತಿಳಿಸಲು ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ‘ಈ ಹಿಂದೆ ನಡೆದುಕೊಂಡು ಬಂದಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಕೂಡ ನಡೆಯಲಿದ್ದು, ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸುತ್ತೇವೆ ಎನ್ನುವ ಭರವಸೆ ನೀಡುತ್ತಿದ್ದೇನೆ. ವಿಶೇಷವಾಗಿ ಮಕ್ಕಳು ಮತ್ತು ಪೋಷಕರು ಯಾವುದೇ ಗೊಂದಲ, ಆಂತಕಕ್ಕೆ ಒಳಗಾಗುವುದು ಬೇಡ’ ಎಂದು ಹೇಳಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








