ಬೆಳಗಾವಿ: ಡಿವೋರ್ಸ್ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ಪಾಪಿ ಪತಿಯೊಬ್ಬ, ಪತ್ನಿಗೆ ಧಮ್ಕಿ ಹಾಕಿರುವ ಘಟನೆಯೊಂದು ನಡೆದಿದೆ.
ಸದ್ಯ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ಎಂಬಾತನೇ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದ. ಹೀಗಾಗಿ ಡಿವೋರ್ಸ್ ನೀಡುವಂತೆ ಕಿರುಕುಳ ನೀಡುತ್ತಿದ್ದ. ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಈ ಕುರಿತು ಭಯಭೀತರಾದ ಮಹಿಳೆ, ಸಾಕಷ್ಟು ಬಾರಿ ಮನವೊಲಿಸಲು ಯತ್ನಿಸಿದರೂ ಆತ ಸುಮ್ಮನಾಗಿಲ್ಲ. ಹೀಗಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.








