ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೇ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.








