ಮುಂಬೈ: ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ (Sunil Kamble) ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರದ (Maharastra) ಪುಣೆಯಲ್ಲಿ ನಡೆದಿದೆ. ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ತೃತೀಯಲಿಂಗಿ ಆರೈಕೆಗಾಗಿ ವಿಶೇಷ ವಾರ್ಡ್ ಸಿದ್ದಪಡಿಸಲಾಗಿತ್ತು. ಇದನ್ನು ಡಿಸಿಎಂ ಸಚಿವ ಅಜಿತ್ ಪವಾರ್ (Ajit Pawar) ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಹೆಸರು ಇಲ್ಲದ ಕಾರಣ ಸುನೀಲ್ ಕಾಂಬ್ಳೆ ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ವೇದಿಕೆಯಿಂದ ಕೆಳಗಿಳಿಯುವಾಗ ಕಾಂಬ್ಳೆಯವರು ಎಡವಿ ಬಿದ್ದರು. ಈ ಕೋಪದ ಕ್ಷಣದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.








