ಢಾಕಾ: ರೈಲಿನ ನಾಲ್ಕು ಭೋಗಿಗಳು ಹೊತ್ತಿ ಉರಿದ ಹಿನ್ನೆಲೆಯಲ್ಲಿ ಐವರು ಸಾವನ್ನಪ್ಪಿರುವ ಘಟನೆ ಬಾಂಗ್ಲಾದೇಶದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಈ ರೈಲಿನಲ್ಲಿ ಭಾರತೀಯರು ಕೂಡ ಇದ್ದರು ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲು ಜೆಸ್ಸೋರ್ನಿಂದ ಢಾಕಾಕ್ಕೆ ತೆರಳುತ್ತಿತ್ತು. ರೈಲು ಸಯಿದಾಬಾದ್ನ ಗೋಲಬಾಗ್ ಪ್ರದೇಶಕ್ಕೆ ತಲುಪಿದಾಗ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಬೆಂಕಿ ತಗುಲಿದ ಬೆನಪೋಲ್ ಪ್ಯಾಸೆಂಜರ್ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುತ್ತಿದ್ದ ಸಂದರ್ಭದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಬಾಂಗ್ಲಾದೇಶದಲ್ಲಿ ನಾಳೆ (ಜ.07) ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಘಟನೆಯನ್ನು ವಿರೋಧ ಪಕ್ಷಗಳು ವಿರೋಧಿಸಿವೆ. ಅಲ್ಲದೇ, ಘಟನೆಯ ಹಿಂದೆ ವಿರೋಧ ಪಕ್ಷಗಳ ಕೈವಾಡವಿದೆ ಎಂದು ಆರೋಪಿಸಲಾಗುತ್ತಿದೆ.








