ಯುವತಿಯೊಬ್ಬಳು ತನ್ನ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಸೋದರ ಸಂಬಂಧಿಯೇ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ 25 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯ ಚಿಕ್ಕಪ್ಪನ ಮಗ ಜ್ಞಾನ ಪ್ರಕಾಶ್ ಈ ಘಟನೆ ನಡೆಸಿ, ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಯವತಿಯು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಡಿಎಂ ಕಾಲೋನಿಯಲ್ಲಿನ ತನ್ನ ತಾಯಿಯ ಮಾವನ ಮನೆಯಲ್ಲಿ ವಾಸಿಸುತ್ತಿದ್ದಳು. ಯುವತಿ ಹಾಗೂ ಹಲ್ಲೆ ಮಾಡಿರುವ ಪ್ರಕಾಶ್ ಒಂದೇ ಕಾಲೇಜಿನಲ್ಲಿ ಕಾನೂನು ಪದವಿ ಓದುತ್ತಿದ್ದರು. ಮಾಹಿತಿಯಂತೆ ಜ್ಞಾನ್ ಪ್ರಕಾಶ್ ಹಲ್ಲೆಗೊಳಗಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ಹೇಳಿಕೊಂಡಿದ್ದಾನೆ. ಯುವತಿ ಮಾತ್ರ ಈ ಮದುವೆಗೆ ಒಪ್ಪಿರಲಿಲ್ಲ. ಹೀಗಾಗಿ ಕೋಪಗೊಂಡ ಪ್ರಕಾಶ್, ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆ ನಂತರ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಯುವಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.








