ತುಮಕೂರು: ಕಾರು ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಹತ್ತಿರ ಈ ಘಟನೆ ಸಂಭವಿಸಿದೆ. ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದ್ದು, ಮೂವರು ಕೂಡ ಬೈಕ್ ನಲ್ಲಿ ಸಂಚರಿಸುತ್ತಿದ್ದರು.
ಸಾವನ್ನಪ್ಪಿದ ಮೂವರೂ ಆದಿಚುಂಚನಗಿರಿ ಮಠಕ್ಕೆ ಹೋಗಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








