ಬೆಂಗಳೂರು: ಬೈಕ್ ಸವಾರನೊಬ್ಬ ಮಹಿಳಾ ಎಸ್ಪಿ ಕಾರಿಗೆ ಡಿಕ್ಕಿ ಹೊಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಇಲ್ಲಿಯ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಯುವಕ ಬೈಕ್ ಡಿಕ್ಕಿ ಹೊಡೆಸಿದ್ದಲ್ಲದೇ, ಬುದ್ಧಿ ಹೇಳಲು ಬಂದ ಎಸ್ಪಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಎಸ್ಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಆರ್ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿ ಬಂಧಿಸಿದ್ದಾರೆ. ಬಿಎಂಟಿಎಫ್ ಎಸ್ಪಿ ಡಾ. ಶೋಭರಾಣಿ ಅವರ ಕಾರಿಗೆ ಯುವಕನ ಬೈಕ್ ಡಿಕ್ಕಿ ಹೊಡೆದಿದೆ. ಆಗ ಆತ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಂಧಿತ ಆರೋಪಿ ಸಿಎ ಓದುತ್ತಿದ್ದ ಎನ್ನಲಾಗಿದೆ.








