ಚಿಕ್ಕಮಗಳೂರು: ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಜಿಲ್ಲೆ ಕೊಪ್ಪ(Koppa) ತಾಲೂಕಿನ ಗುಡ್ಡೆತೋಟ ಹತ್ತಿರ ನಡೆದಿದೆ. ಮೈಸೂರು ಮೂಲದ ಮಾಲಾಧಾರಿಗಳಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಬಸ್ ನಲ್ಲಿ ಸುಮಾರು 34 ಜನ ಮಾಲಾಧಾರಿಗಳಿದ್ದರು ಎನ್ನಲಾಗಿದ್ದು, 15 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








