ಗದಗ: ನಟ ಯಶ್ (Yash) ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳು ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆಯಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದು, ಲಕ್ಷ್ಮೇಶ್ವರದ (Laxmeshwar) ಸೂರಣಗಿ ಗ್ರಾಮದಲ್ಲಿ ನಡೆದಿದೆ. ಅಲ್ಲದೇ, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ನವೀನ್ ಗಾಜಿ (20) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಮಂಜುನಾಥ್, ಪ್ರಕಾಶ್, ಹನುಮಂತ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯರಾತ್ರಿ ವೇಳೆ ಕಟೌಟ್ ಕಟ್ಟುವಾಗ ಈ ಅವಘಡ ಸಂಭವಿಸಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








