ಪತ್ನಿಯೇ ಪತಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಜಾ ಜಲಾಲ್ಪುರ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, 20 ವರ್ಷದ ಪಾರ್ವತಿ ಕೊಲೆ ಮಾಡಿರುವ ಪತ್ನಿ. ಪತಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ. ಯಾವುದೋ ಕಾರಣಕ್ಕೆ ಪತಿ ಹಾಗೂ ಪತ್ನಿಯ ಮಧ್ಯೆ ಜಗಳ ನಡೆದಿದೆ. ಅದು ವಿಕೋಪಕ್ಕೆ ತೆರಳಿ, ಪತ್ನಿಯೇ ಸುತ್ತಿಗೆಯಿಂದ ತಲೆಗೆ ಹೊಡೆದಿದ್ದಾಳೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








