ಬೆಂಗಳೂರು: ಸಿಸಿಬಿ ಅಧಿಕಾರಿಗಳು ನಗರದಲ್ಲಿನ ರೇಸ್ ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂ. ಹಣ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.
ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್ಟಿ ಕಟ್ಟದೆ ವಂಚಿಸುತ್ತಿರುವ ಆರೋಪಗಳ ಮೇಲೆ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ದಾಖಲೆ ಇಲ್ಲದ 3.47 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದ 60 ಜನರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದಾಳಿ ವೇಳೆ ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ನೀಡುವಂತೆ ಸಿಸಿಬಿ ಪೊಲೀಸರು, ನೋಟಿಸ್ ನೀಡಲಾಗಿದೆ.