ಚಿಕ್ಕಮಗಳೂರು: ಪ್ರಾಣಿಗಳ ಬೇಟಿಗೆ ಹಾಕಲಾಗಿದ್ದ ಉರುಳಿಗೆ ಸಿಲುಕಿ ಒಂದೂವರೆ ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ (Chikkamagalur) ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಉರುಳಿಗೆ ಸಿಲುಕಿ ಚಿರತೆ ನರಳಾಡಿ ಸಾವನ್ನಪ್ಪಿದೆ ಎನ್ನಲಾಗಿದೆ. ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿ, ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎನ್ನಲಾಗಿದೆ. ಚಿರತೆ ಕಳೆದ ಎರಡು ತಿಂಗಳಿನಿಂದ ಹುಳಿಯಾರದಹಳ್ಳಿ ಸೇರಿದಂತೆ ವಿವಿಧ ಗ್ರಾಮದಲ್ಲಿ ಸಂಚಾರ ಮಾಡುತ್ತಿತ್ತು.








