ಉಡುಪಿ: ಪ್ರವಾಸಿಗರೊಬ್ಬರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಯ ತಪ್ಪಿ ಬಾವಿಗೆ ಬಿದ್ದು ಪಜೀತಿ ಅನುಭವಿಸಿರುವ ಘಟನೆಯೊಂದು ನಡೆದಿದೆ.
ನಗರದಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರವಾಸಿಗರೊಬ್ಬರು ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾಗಲಕೋಟೆ ಮೂಲದ ಸಂತೋಷ್ ಎಂಬ ವ್ಯಕ್ತಿಯೇ ಮಠದ ಸಮೀಪದ ಶಿರಬೀಡು ಹತ್ತಿರ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಆಯತಪ್ಪಿ ಬಿದ್ದಿದ್ದಾರೆ. ಕಡಿಮೆ ನೀರು ಇರುವ ಹಿನ್ನೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರು ಪ್ರವಾಸಿಗರ ಪ್ರಾಣ ರಕ್ಷಿಸಿದ್ದಾರೆ.








