ಪಟ್ಟಣಂತಿಟ್ಟ: ಜ್ಯೋತಿ ರೂಪದಲ್ಲಿ ಅಯ್ಯಪ್ಪ (Ayyappa)ನ ದರ್ಶವನ್ನು ಭಕ್ತರು ಮಾಡಿಕೊಂಡಿದ್ದಾರೆ.
ಸಂಜೆ 6.48ರ ಸುಮಾರಿಗೆ ಅಯ್ಯಪ್ಪ (Sabarimala) ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ಸಂದರ್ಭದಲ್ಲಿ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತ ಲಕ್ಷಾಂತರ ಭಕ್ತರು ಮಕರ ಜ್ಯೋತಿ (Makara Jyoti) ದರ್ಶನ ಪಡೆದರು.
ಕೇರಳದ ಶಬರಿಮಲೆ (Sabarimala) ಅಯ್ಯಪ್ಪ ದೇಗುಲದಲ್ಲಿ ಮಕರ ಸಂಕ್ರಮಣದ (Makara Sankranti) ದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪನ ದರ್ಶನ ಮಾಡಿದರು. ದೇವಾಲಯದ ಸುತ್ತಮುತ್ತ ಹೆಚ್ಚಿನ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.