ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಘೋಷಣೆ ಮಾಡಿದ ಪ್ಯಾಕೇಜ್ ಹಣ ಬಿಡುಗಡೆ ಮಾಡಿ : ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

admin by admin
June 25, 2020
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಬೆಂಗಳೂರು : ನೇಕಾರರಿಗೆ ಘೋಷಣೆ ಮಾಡಿರುವ ಪರಿಹಾರದ ಪ್ಯಾಕೇಜ್‍ನ್ನು ಶೀಘ್ರವೇ ಜಾರಿಗೆ ತಂದು ಹಣ ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೇಕಾರರ ಬದುಕು ದಿನೇ ದಿನೇ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದೆ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಸುಮಾರು 2 ಲಕ್ಷ ಸಂಖ್ಯೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿವೆ. ಆದರೆ ನೈಜವಾಗಿ ಸುಮಾರು 7-8 ಲಕ್ಷ ಕುಟುಂಬಗಳು ಈ ವೃತ್ತಿಯನ್ನು ಅವಲಂಬಿಸಿ ಬದುಕುತ್ತಿವೆ. ಸರ್ಕಾರವು 20 ಎಚ್.ಪಿ ಗಿಂತ ಕಡಿಮೆ ವಿದ್ಯುತ್ ಬಳಸುವ ಮಗ್ಗಗಳನ್ನು ಮಾತ್ರ ಲೆಕ್ಕ ಹಾಕಿ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿದೆ.

ಪ್ರತಿ ದಿನದ ದುಡಿಮೆಯನ್ನು ನಂಬಿ ಬದುಕುವ ನೇಕಾರ ಸಮುದಾಯವು ಸರ್ಕಾರದ ನೀತಿಗಳಿಂದಾಗಿ ಮತ್ತು ನಿರ್ಲಕ್ಷ ಧೋರಣೆಗಳಿಂದಾಗಿ ತೀವ್ರ ರೀತಿಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರಿಂದಾಗಿ ಆಯಾ ದಿನದ ಅನ್ನವನ್ನು ಹೊಂದಿಸಿಕೊಳ್ಳಲಾಗದ ಪರಿಸ್ಥಿತಿ ಈ ಕುಟುಂಬಗಳಲ್ಲಿ ಉದ್ಭವವಾಗಿದೆ. ಕಳೆದ 7-8 ತಿಂಗಳಿನಿಂದ ತಯಾರಿಸಿದ ಸೀರೆ, ಬಟ್ಟೆ ಮತ್ತು ಇನ್ನಿತರೆ ಉತ್ಪನ್ನಗಳು ಮಾರಾಟವಾಗದೆ ಹಾಗೆ ಉಳಿದಿವೆ. ನೇಕಾರಿಕೆ ಬಿಟ್ಟು ಇತರೆ ಯಾವುದೆ ಕಸುಬುಗಳು ಗೊತ್ತಿಲ್ಲದೆ ಇರುವ ಇತರೆ ಕುಶಲಕರ್ಮಿ ಜಾತಿಗಳಂತೆ ನೇಕಾರಿಕೆಯೂ ಒಂದಾಗಿರುವುದರಿಂದ ಸಮಸ್ಯೆ ಇಷ್ಟೊಂದು ಬಿಗಡಾಯಿಸಲು ಕಾರಣವಾಗಿದೆ.

ಕಳೆದ 15 ದಿನಗಳಿಂದ ರಾಜ್ಯದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮುಂತಾದ ಕಡೆ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆಘಾತಕಾರಿ ಮಾಹಿತಿ ಇದೆ. ಬಿಕ್ಕಟ್ಟಿನ ಆರಂಭ ಇದು. ದುಡಿದು ಬದುಕುವ ಇಂತಹ ಸಮುದಾಯಗಳ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದರೆ, ಇದು ಸರ್ಕಾರದ ವೈಫಲ್ಯದ ನೇರ ಫಲ.

ಕಳೆದ ಐದಾರು ತಿಂಗಳಿಂದ ಸುಮಾರು 1000 ಕೋಟಿ ರೂಗಳ ಉತ್ಪನ್ನವನ್ನು ನೇಕಾರರು ಸಿದ್ಧ ಪಡಿಸಿದ್ದಾರೆ. ಇದರಲ್ಲಿ ಕೈ ಮಗ್ಗದಲ್ಲಿ ಉತ್ಪಾದಿಸಿದ ಬಟ್ಟೆಗಳ ಮೌಲ್ಯ ಸುಮಾರು 15 ಕೋಟಿ. ಉಳಿದದ್ದು ವಿದ್ಯುತ್ ಮಗ್ಗಗಳಲ್ಲಿ ತಯಾರಿಸಿದ್ದು. ಇದನ್ನು ಸರ್ಕಾರವೊಂದು ನಿಭಾಯಿಸುವುದಕ್ಕೆ ಯಾವ ಸವiಸ್ಯೆಯೂ ಇಲ್ಲ. ಅಂಗನವಾಡಿ ಕಾರ್ಯಕರ್ತರು, ಸರ್ಕಾರಿ ನೌಕರರು, ಆಶಾ ಕಾರ್ಯಕರ್ತೆಯರು ಮತ್ತು ಪಡಿತರ ವಿತರಣೆ ವ್ಯವಸ್ಥೆಗಳ ಮೂಲಕ ವಿತರಿಸಿ ನಿಭಾಯಿಸಬಹುದು. ಇದನ್ನು ಮಾಡುವುದಕ್ಕೆ ಸರ್ಕಾರಕ್ಕೆ ಇಚ್ಛಾಶಕ್ತಿ ಬೇಕು ಎಂದು ಒತ್ತಾಯಿಸಿದ್ದಾರೆ.

ಇದರಲ್ಲಿ ಕೆಲವು ರೀತಿಯ ಸೀರೆಗಳನ್ನು ಪಾಲಿಶಿಂಗ್ ಮುಂತಾದ ಪ್ರಕ್ರಿಯೆ ಮಾಡಿ ಪರಿ ಪೂರ್ಣಗೊಳಿಸಬೇಕಾಗಿರುತ್ತದೆ. ಇಂಥದನ್ನು ಕೆ.ಎಸ್.ಐ.ಸಿ ಮೂಲಕ ನಿಭಾಯಿಸಬಹುದು ಹಾಗೂ ಎಂ.ಎಸ್.ಐ.ಎಲ್, ಕೆ.ಎಸ್.ಟಿ.ಐ.ಡಿ.ಸಿ. ಅಥವಾ ಕೆ.ಹೆಚ್.ಡಿ.ಸಿ. ಮೂಲಕವಾದರೂ ಖರೀದಿ ಮಾಡಿ ಮಾರುಕಟ್ಟೆ ಮಾಡುವ ಯೋಜನೆಯನ್ನು ರೂಪಿಸಬೇಕು. ಸರ್ಕಾರ ಈ ರೀತಿಯ ಉಪಕ್ರಮಗಳನ್ನು ತುರ್ತಾಗಿ ಅನುಸರಿಸಿ ನೇಕಾರರ ಸಂಕಷ್ಟಗಳನ್ನು ನಿಭಾಯಿಸಬೇಕು. ಇಲ್ಲದಿದ್ದರೆ ಗಂಭೀರ ಅನಾಹುತಗಳಿಗೆ ನೇಕಾರರ ಕುಟುಂಬಗಳನ್ನು ಸರ್ಕಾರವೇ ದೂಡಿದಂತಾಗುತ್ತದೆ.

ನೇಕಾರರ ಸಂಕಷ್ಟಗಳನ್ನು ನೀಗಿಸಲು ಕೃಷಿ ಕ್ಷೇತ್ರದಲ್ಲಿ ಅನುಸರಿಸಲಾಗುತ್ತಿರುವ ಆವರ್ತ ನಿಧಿ ಪದ್ಧತಿಯನ್ನು ನೇಕಾರಿಕೆಗೂ ಅಳವಡಿಸಿ ಬಿಕ್ಕಟ್ಟುಗಳು ಬಂದಾಗ ಉಪಯೋಗಿಸಲು ಕ್ರಮವಹಿಸಬೇಕು. ಹಾಗಾಗಿ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಶೀಘ್ರವಾಗಿ ಅವರ್ತ ನಿಧಿಯನ್ನು ಸ್ಥಾಪಿಸಿ ಉಪಯೋಗಿಸಬೇಕು.

ಸರ್ಕಾರ ಪ್ರತಿ ನೇಕಾರರ ಕುಟುಂಬಕ್ಕೆ ರೂ.2,000/- ಗಳನ್ನು ನೀಡುವುದಾಗಿ ಘೋಷಿಸಿ 2 ತಿಂಗಳು ಕಳೆದರೂ ಇದುವರೆಗೆ ಒಂದೇ ಒಂದು ರೂಪಾಯಿಯನ್ನು ಕೂಡ ನೇಕಾರರ ಕುಟುಂಬಗಳಿಗೆ ತಲುಪಿಲ್ಲ. ಸರ್ಕಾರವು ಸಂಪೂರ್ಣವಾಗಿ ನೇಕಾರರನ್ನು ನಿರ್ಲಕ್ಷಿಸಿದೆ ಮತ್ತು ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ ಅತ್ಯಂತ ತುರ್ತಾಗಿ ಹಣ ಬಿಡುಗಡೆ ಮಾಡಬೇಕು.

ಮುಖ್ಯಮಂತ್ರಿಗಳು ನೇಕಾರರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದರು. ಆದರೆ ಆಗಸ್ಟ್-2019 ರಿಂದ ಮಾರ್ಚ್-2020 ರವರೆಗೆ ಮನ್ನಾ ಮಾಡಿದ್ದು 4,500 ಜನರ ಸುಮಾರು ರೂ.18.05 ಕೋಟಿ ಮಾತ್ರ. ಏಪ್ರಿಲ್ 01 ರಿಂದ ಈವರೆಗೆ ಕೇವಲ 6,000 ಜನರ ರೂ.26 ಕೋಟಿಗಳನ್ನು ಮಾತ್ರ ಮನ್ನಾ ಮಾಡಲಾಗಿದೆ. ಆದುದರಿಂದ, ಶೀಘ್ರವಾಗಿ ಬಾಕಿ ಉಳಿದಿರುವ ಎಲ್ಲಾ ನೇಕಾರರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು. ಕೇಂದ್ರ ಸರ್ಕಾರವು ದೊಡ್ಡ ದೊಡ್ಡ ಬಂಡವಾಳಿಗರ ಲಕ್ಷಾಂತರ ಕೋಟಿ ಸಾಲವನ್ನು ಕೈಬಿಡುತ್ತಿರುವಾಗ ಬಡವರ ಸಾಲ ಮನ್ನಾ ಮಾಡುವುದು ಅಪರಾಧವಲ್ಲ.

ಈ ಹಿಂದೆ ನಾವು ಒತ್ತಾಯ ಮಾಡಿದಂತೆ ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000/-ಗಳನ್ನು ತುರ್ತಾಗಿ ನೀಡಬೇಕು ಮತ್ತು ಕೊರೋನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‍ಗಳನ್ನು ನೀಡಿ ಸಂರಕ್ಷಿಸಬೇಕು.

ನೇಕಾರರು ತಯಾರಿಸಿದ ಉತ್ಪನ್ನಗಳನ್ನು ಆಧರಿಸಿ ಅವುಗಳ ಮೇಲೆ ಸಾಲ ಸೌಲಭ್ಯವನ್ನು ತುರ್ತಾಗಿ ಕಲ್ಪಿಸಿ ಬಿಕ್ಕಟ್ಟನ್ನು ಬಗೆಹರಿಸಬೇಕು.

ವಿದ್ಯುತ್ ಶುಲ್ಕವನ್ನು ಕೂಡಲೇ ಪೂರ್ಣ ಪ್ರಮಾಣದಲ್ಲಿ ಮನ್ನಾ ಮಾಡಬೇಕು ಮತ್ತು ಛಿದ್ರಗೊಂಡಿರುವ ತಮ್ಮ ಬದುಕನ್ನು ಪುನರ್ ನಿರ್ಮಾಣ ಮಾಡಿಕೊಳ್ಳಲು ನೇಕಾರರಿಗೆ ಸಹಕಾರಿ ಮತ್ತು ಇನ್ನಿತರೆ ಬ್ಯಾಂಕುಗಳ ಮೂಲಕ ಸುಲಭವಾಗಿ ಸಾಲ ಸಿಗುವಂತೆ ಮಾಡಬೇಕು.

ಕಚ್ಚಾ ವಸ್ತುಗಳು ಸುಲಭ ದರದಲ್ಲಿ ಕೈಗೆಟುಕುವಂತೆ ಮಾಡಬೇಕು ಮತ್ತು ಜಿ.ಎಸ್.ಟಿ. ಮುಂತಾದವುಗಳ ಬಾಕಿ ಮೊತ್ತದ ವಸೂಲಾತಿಯನ್ನು ಸಂಪೂರ್ಣವಾಗಿ ಸಮಸ್ಯೆ ಬಗೆಹರಿಯುವವರೆಗೆ ಕೈಬಿಡಬೇಕು.

ಈ ಎಲ್ಲಾ ಒತ್ತಾಯಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ನೇಕಾರರ ಸಂಕಷ್ಟಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Tags: Siddaramaiah
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram