ಇರಾನ್(Iran)ನ ಮಾರಣಾಂತಿಕ ಕ್ಷಿಪಣಿ ಹಾಗೂ ಡ್ರೋನ್ ದಾಳಿಯ ನಂತರ ಪಾಕ್, ಇರಾನ್ ನ ಉಗ್ರಗಾಮಿ ಪ್ರದೇಶಗಳ ಮೇಲೆ ವೈಮಾನಿಕ ದಾಳಿ ಪ್ರಾರಂಭಿಸಿದೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇರಾನ್ ಆಕ್ರಮಣವನ್ನು ಒಪ್ಪಿಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿವೆ. ಬಲೂಚಿಸ್ತಾನದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮಂಗಳವಾರ ನಡೆದ ಇರಾನ್ ಕಾರ್ಯಾಚರಣೆಯನ್ನು ಟೆಹ್ರಾನ್ನ ವಿದೇಶಾಂಗ ಸಚಿವರು ಒಪ್ಪಿಕೊಂಡಿದ್ದಾರೆ. ದಾಳಿಗಳು ಜೈಶ್ ಅಲ್-ಅದ್ಲ್ ಅನ್ನು ಗುರಿಯಾಗಿರಿಸಿಕೊಂಡಿವೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಬಲೂಚ್ ಅವರು ಅಂತಾರಾಷ್ಟ್ರೀಯ ಮಾನದಂಡಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಗಡಿಯಾಚೆ ದಾಳಿ ನಡೆಸುವ ಉಗ್ರಗಾಮಿ ಗುಂಪುಗಳಿಗೆ ಆಶ್ರಯ ನೀಡುತ್ತಿರುವ ಆರೋಪವನ್ನು ಎರಡೂ ರಾಷ್ಟ್ರಗಳು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ದಾಳಿಯ ನಂತರ ಇರಾನ್ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಬುಧವಾರ ಇರಾನ್ ರಾಯಭಾರಿಯನ್ನು ದೇಶದಿಂದ ಹೊರಹಾಕಿದೆ. ತನ್ನ ರಾಯಭಾರಿಯನ್ನು ಮರಳಿ ಕರೆಯಿಸಿಕೊಂಡಿದೆ.








