ಗದಗ: ಅಯೋಧ್ಯೆಯಲ್ಲಿ ರಾಮನ ಭವ್ಯ ಮಂದಿರ (Ayodhya Ram Manidr) ನಿರ್ಮಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲೆಡೆ ಸಂಭ್ರಮಾಚರಣೆಗೆ ಸಿದ್ಧವಾಗಿದೆ.
ಈ ಹಿನ್ನೆಲೆಯಲ್ಲಿ ಗದಗ (Gadag) ನಗರದಲ್ಲಿ ಶ್ರೀರಾಮಸೇನೆ ಶ್ರೀರಾಮ ಮೂರ್ತಿಯ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಶೋಭಾಯಾತ್ರೆಗೆ ಪೊಲೀಸ್ ಇಲಾಖೆ ಅಡ್ಡಿಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ಶೋಭಾಯಾತ್ರೆ ಮಾಡುವಂತಿಲ್ಲ ಎಂದು ಸೂಚಿಸಿದೆ. ಆದರೆ, ಪೊಲೀಸರ ಸೂಚನೆಗೆ ಆಕ್ರೋಶ ವ್ಯಕ್ತಪಡಿಸಿದ ಶ್ರೀರಾಮಸೇನೆ, ಯಾರೇ ಬಂದರೂ ಶೋಭಾಯಾತ್ರೆ ನಿಲ್ಲಲ್ಲ. ನಡೆಸಿಯೇ ತೀರುತ್ತೇವೆ ಎಂದು ಹೇಳಿದೆ.
ಜನವರಿ 22 ರಂದು ಗದಗ ನಗರದಲ್ಲಿ ಬೃಹತ್ ಶ್ರೀರಾಮ ಶೋಭಾಯತ್ರೆ ಹಮ್ಮಿಕೊಂಡಿದೆ. ಇದಕ್ಕೆ ಇಡೀ ಜಿಲ್ಲೆಯಲ್ಲಿ ಸಾಕಷ್ಟು ಜನಜಾಗೃತಿ ಕೂಡ ಮೂಡಿಸಿದೆ. ಕರಪತ್ರ ನೀಡಿ ಶೋಭಾಯಾತ್ರೆಯಲ್ಲಿ ಭಾಗವಹಿಸುವಂತೆ ಶ್ರೀರಾಮ ಸೇನೆ ಮನವಿ ಮಾಡಿತ್ತು. ಆದರೆ, ಈಗ ಪೊಲೀಸರು ಅಡ್ಡಿ ಮಾಡಿದ್ದು, ನಡೆಸಿಯೇ ನಡೆಸುತ್ತೇವೆ ಎಂದು ಶ್ರೀರಾಮ ಸೇನೆ ಹೇಳಿದೆ. ಇದು ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆಯೋ ಕಾಯ್ದು ನೋಡಬೇಕಿದೆ.








