ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲಿದ್ದು, ನಾಳೆಯಿಂದ ಪಂದ್ಯ ಆರಂಭವಾಗಲಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟವಾಗಿದ್ದು, ಕೆಲವು ಅಚ್ಚರಿಯ ಆಯ್ಕೆ ಮಾಡಲಾಗಿದೆ. ಭಾರತದ ಪರ ಯಾರು ಆಡಲಿದ್ದಾರೆ ಎಂಬ ಸುಳಿವನ್ನು ರೋಹಿತ್ ನೀಡಿದ್ದಾರೆ. ವಿರಾಟ್ ಕೊಹ್ಲಿ (Virat Kohli) ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬುದಕ್ಕೆ ಉತ್ತರ ಸಿಕ್ಕಿದ್ದು, ಈ ಪಂದ್ಯದಲ್ಲಿ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್, ಕೊಹ್ಲಿ ಸ್ಥಾನ ತುಂಬುವುದು ನಿಶ್ಚಿತವಾಗಿದೆ. ಶ್ರೇಯಸ್ ಅಯ್ಯರ್ 5 ನೇ ಕ್ರಮಾಂಕದಲ್ಲಿ ಆಡುವುದನ್ನು ಕಾಣಬಹುದಾಗಿದೆ. ಮೂವರು ಸ್ಪಿನ್ನರ್ಗಳು ತಂಡದಲ್ಲಿ ಆಡುವುದನ್ನು ಕಾಣಬಹುದು. ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗ ನಿಭಾಯಿಸುವ ಸಾಧ್ಯತೆ ದೆ. ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲರ್ ಆಗಿ ಕಾಣಿಸಲಿದ್ದಾರೆ.
ಇದೆಲ್ಲದರ ಹೊರತಾಗಿಯೂ ರೋಹಿತ್ ಯಾವ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯಲ್ಲಿದ್ದಾರೆ ಎಂಬುವುದನ್ನು ನೋಡಬಹುದಾಗಿದೆ.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಇದ್ದಾರೆ.








